Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:48 - ಪರಿಶುದ್ದ ಬೈಬಲ್‌

48 ಇಸ್ರೇಲರು ಬೆನ್ಯಾಮೀನ್ಯರ ಪ್ರದೇಶಕ್ಕೆ ಹಿಂತಿರುಗಿ ಹೋದರು. ಅವರು ಹೋದ ಪ್ರತಿಯೊಂದು ನಗರದಲ್ಲಿ ಅವರ ಎಲ್ಲ ಪಶುಗಳನ್ನು ಸಹ ಕೊಂದರು. ತಮ್ಮ ಕಣ್ಣಿಗೆ ಬಿದ್ದ ಎಲ್ಲವನ್ನೂ ಅವರು ನಾಶಮಾಡಿದರು. ಅವರು ಹೋದ ಪ್ರತಿಯೊಂದು ನಗರವನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಇಸ್ರಾಯೇಲರು ಪುನಃ ಹಿಂತಿರುಗಿ ಬಂದು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ, ದನಕುರಿಗಳನ್ನೂ, ಸಿಕ್ಕಿದ್ದೆಲ್ಲವನ್ನು ಸಂಹರಿಸಿ ಎಲ್ಲಾ ಊರುಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇಸ್ರಯೇಲರು ತಿರುಗಿಕೊಂಡು ಬೆನ್ಯಾಮೀನ್ಯ ಪ್ರಾಂತ್ಯದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ ದನಕುರಿಗಳನ್ನೂ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ ಎಲ್ಲ ಊರುಗಳಿಗೆ ಬೆಂಕಿ ಹೊತ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಇಸ್ರಾಯೇಲ್ಯರು ತಿರುಗಿಕೊಂಡು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ ದನಕುರಿಗಳನ್ನೂ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ ಎಲ್ಲಾ ಊರುಗಳಿಗೆ ಬೆಂಕಿಹೊತ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಇಸ್ರಾಯೇಲರು ಬೆನ್ಯಾಮೀನ್ಯರ ಮೇಲೆ ತಿರುಗಿ ಹೋಗಿ, ಪಟ್ಟಣದಲ್ಲಿ ಜನರನ್ನೂ, ಪಶುಗಳನ್ನೂ, ಕೈಗೆ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ, ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:48
7 ತಿಳಿವುಗಳ ಹೋಲಿಕೆ  

ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ.


ಅದೇ ಸಮಯದಲ್ಲಿ, ಇಸ್ರೇಲರ ಸೈನ್ಯವು ಯೆಹೂದದ ಕೆಲವು ಪಟ್ಟಣಗಳ ಮೇಲೆ ಧಾಳಿಮಾಡಿತು. ಅವರು ಬೇತ್ಹೋರೋನಿನಿಂದ ಹಿಡಿದು ಸಮಾರ್ಯದವರೆಗೆ ಇರುವ ಪಟ್ಟಣಗಳ ಮೇಲೆ ಧಾಳಿ ಮಾಡಿದರು. ಅವರು ಮೂರು ಸಾವಿರ ಜನರನ್ನು ಕೊಂದು ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಅಮಚ್ಯನು ತನ್ನೊಂದಿಗೆ ಯುದ್ಧಕ್ಕೆ ಸೇರಿಸಿಕೊಳ್ಳದೆ ಇದ್ದದರಿಂದ ಆ ಸೈನಿಕರು ಕೋಪಗೊಂಡಿದ್ದರು.


ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು.


ಮಿಚ್ಛೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣುಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿಕೊಡುವುದಿಲ್ಲ” ಎಂಬುದೇ ಆ ಪ್ರತಿಜ್ಞೆ.


ಅದರಂತೆಯೇ ಬೆನ್ಯಾಮೀನ್ ಕುಲದ ಗಂಡಸರು, ನಾಟ್ಯವಾಡಲು ಬಂದಿದ್ದ ಯುವತಿಯರಲ್ಲಿ, ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ತಮ್ಮ ಹೆಂಡತಿಯರನ್ನಾಗಿ ತೆಗೆದುಕೊಂಡು ತಮ್ಮ ಪ್ರದೇಶಕ್ಕೆ ಹಿಂತಿರುಗಿ ಹೋದರು. ಆ ಪ್ರದೇಶದಲ್ಲಿ ಬೆನ್ಯಾಮೀನ್ಯರು ಪುನಃ ನಗರಗಳನ್ನು ಕಟ್ಟಿ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು