Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:7 - ಪರಿಶುದ್ದ ಬೈಬಲ್‌

7 ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಲ್ಲಿ ಕೂಡಿರುವ ಎಲ್ಲ ಇಸ್ರಯೇಲರೇ, ಈಗ ನಿಮ್ಮ ಆಲೋಚನೆಗಳನ್ನೂ ಅಭಿಪ್ರಾಯಗಳನ್ನೂ ಹೇಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲ್ಯರೇ, ಈಗ ನಿಮ್ಮ ಆಲೋಚನಾಭಿಪ್ರಾಯಗಳನ್ನು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲರೇ, ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:7
12 ತಿಳಿವುಗಳ ಹೋಲಿಕೆ  

ಇದನ್ನು ನೋಡಿದ ಪ್ರತಿಯೊಬ್ಬರು, “ಈ ಮುಂಚೆ ಇಸ್ರೇಲಿನಲ್ಲಿ ಇಂಥದ್ದು ಆಗಿಲ್ಲ. ನಾವು ಈಜಿಪ್ಟಿನಿಂದ ಹೊರಬಂದಾಗಿನಿಂದ ಇಂಥದನ್ನು ನೋಡಿಲ್ಲ. ಇದಕ್ಕೆ ತಕ್ಕಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ” ಎಂದು ಅಂದುಕೊಂಡರು.


ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.


ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.


ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು