10 ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಆ ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ.
10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕಮಕ್ಕಳನ್ನೂ ಬಿಡದೆ ಸಂಹರಿಸಬೇಕು;
10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
10 ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ.
ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.
ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.
ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು “ಆಕೋರ್” ಕಣಿವೆಗೆ ತೆಗೆದುಕೊಂಡು ಹೋದರು.