Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:11 - ಪರಿಶುದ್ದ ಬೈಬಲ್‌

11 ನೀವು ಇದನ್ನು ಮಾಡಲೇಬೇಕು. ನೀವು ಯಾಬೇಷ್ ಗಿಲ್ಯಾದಿನಲ್ಲಿರುವ ಪ್ರತಿಯೊಬ್ಬ ಮನುಷ್ಯನನ್ನು ಕೊಲ್ಲಬೇಕು. ಗಂಡಸಿನೊಂದಿಗೆ ಲೈಂಗಿಕಸಂಪರ್ಕ ಹೊಂದಿದ ಪ್ರತಿಯೊಬ್ಬ ಹೆಂಗಸನ್ನೂ ನೀವು ಕೊಂದುಹಾಕಬೇಕು. ಆದರೆ ಕನ್ಯೆಯರನ್ನು ನೀವು ಕೊಲ್ಲಬಾರದು” ಎಂದು ಹೇಳಿದರು. ಆ ಸೈನಿಕರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೇಗೂ ಪುರುಷರೆಲ್ಲರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ,” ಎಂದು ಆಜ್ಞಾಪಿಸಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೇಗೂ ಗಂಡಾದದ್ದೆಲ್ಲವನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವದು ನಿಮ್ಮ ಕೆಲಸ ಎಂದು ಆಜ್ಞಾಪಿಸಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಲ್ಲಾ ಗಂಡಸರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲ ಮಾಡಿರಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:11
4 ತಿಳಿವುಗಳ ಹೋಲಿಕೆ  

ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು, ಹೆಂಗಸರು, ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ.


ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು.


ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು