ನ್ಯಾಯಸ್ಥಾಪಕರು 21:13 - ಪರಿಶುದ್ದ ಬೈಬಲ್13 ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನವಾಕ್ಯವನ್ನು ಪ್ರಕಟಿಸಲು ಅವರು ತಿರಿಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರುಭೂಮಿಯ ಕಡೆಗೆ ಓಡಿದರು. ಅವರು ರಿಮ್ಮೋನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದುಹಾಕಿದರು.