ನ್ಯಾಯಸ್ಥಾಪಕರು 21:14 - ಪರಿಶುದ್ದ ಬೈಬಲ್14 ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲ್ಯರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಅವರು ಸಾಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |
ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.