Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:15 - ಪರಿಶುದ್ದ ಬೈಬಲ್‌

15 ಇಸ್ರೇಲರು ಬೆನ್ಯಾಮೀನ್ಯರಿಗಾಗಿ ವ್ಯಥೆಪಟ್ಟರು. ಏಕೆಂದರೆ ಯೆಹೋವನು ಅವರನ್ನು ಇಸ್ರೇಲಿನ ಉಳಿದ ಕುಲದವರಿಂದ ಪ್ರತ್ಯೇಕಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ನಮ್ಮಲ್ಲಿ ಒಂದು ಲೋಪವನ್ನುಂಟುಮಾಡಿದ್ದಾರೆಂದು ಇಸ್ರಯೇಲರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ನಮ್ಮಲ್ಲಿ ಒಂದು ಲೋಪವನ್ನುಂಟು ಮಾಡಿದ್ದಾನೆಂದು ಇಸ್ರಾಯೇಲ್ಯರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:15
8 ತಿಳಿವುಗಳ ಹೋಲಿಕೆ  

ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.


ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.


ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.


ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು.


ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ.


ಇಸ್ರೇಲರ ಹಿರಿಯರು, “ಬೆನ್ಯಾಮೀನ್ಯರ ಹೆಂಗಸರು ಕೊಲೆಗೀಡಾಗಿದ್ದಾರೆ. ಈಗ ಜೀವಂತವಿದ್ದ ಬೆನ್ಯಾಮೀನ್ ಗಂಡಸರಿಗೆ ಹೆಂಡಂದಿರನ್ನು ಎಲ್ಲಿಂದ ತರುವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು