Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:2 - ಪರಿಶುದ್ದ ಬೈಬಲ್‌

2 ಇಸ್ರೇಲರು ಬೇತೇಲ್ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತುಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು ಗಟ್ಟಿಯಾಗಿ ಅಳುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಬಿದ್ದುಕೊಂಡು ಗಟ್ಟಿಯಾಗಿ ಅಳುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಜನರು ಬೇತೇಲಿಗೆ ಬಂದು, ಅಲ್ಲಿ ದೇವರ ಮುಂದೆ ಸಾಯಂಕಾಲದವರೆಗೆ ಇದ್ದು, ತಮ್ಮ ಧ್ವನಿ ಎತ್ತಿ ಬಹಳವಾಗಿ ಅತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:2
10 ತಿಳಿವುಗಳ ಹೋಲಿಕೆ  

ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ದಾವೀದ ಮತ್ತು ಅವನ ಸೈನ್ಯದ ಇತರರು ಶಕ್ತಿಮೀರಿ ಜೋರಾಗಿ ಅತ್ತರು.


ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.


ದೂತನು ಜನರಿಗೆ ಯೆಹೋವನ ಈ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಅತ್ತರು.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು.


ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.


ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು