ನ್ಯಾಯಸ್ಥಾಪಕರು 21:25 - ಪರಿಶುದ್ದ ಬೈಬಲ್25 ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ; ಪ್ರತಿಯೊಬ್ಬನು ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿ |
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.