Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:6 - ಪರಿಶುದ್ದ ಬೈಬಲ್‌

6 ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನೆಸಿ ದುಃಖದಿಂದ, “ಅಯ್ಯೋ, ಇಸ್ರಯೇಲರಾದ ನಮ್ಮಲ್ಲಿ ಒಂದು ಕುಲ ಕಡಿಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನಸಿ ದುಃಖದಿಂದ - ಅಯ್ಯೋ, ಇಸ್ರಾಯೇಲ್ಯರಾದ ನಮ್ಮಲ್ಲಿ ಒಂದು ಕುಲವು ಕಡಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:6
8 ತಿಳಿವುಗಳ ಹೋಲಿಕೆ  

ಇಸ್ರೇಲರು ಬೆನ್ಯಾಮೀನ್ಯರಿಗಾಗಿ ವ್ಯಥೆಪಟ್ಟರು. ಏಕೆಂದರೆ ಯೆಹೋವನು ಅವರನ್ನು ಇಸ್ರೇಲಿನ ಉಳಿದ ಕುಲದವರಿಂದ ಪ್ರತ್ಯೇಕಗೊಳಿಸಿದ್ದನು.


“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.


ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.


ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.


ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು