ನ್ಯಾಯಸ್ಥಾಪಕರು 3:1 - ಪರಿಶುದ್ದ ಬೈಬಲ್1-2 ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ನೋಡದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವದಕ್ಕೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ, ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”