Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:10 - ಪರಿಶುದ್ದ ಬೈಬಲ್‌

10 ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:10
24 ತಿಳಿವುಗಳ ಹೋಲಿಕೆ  

ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.


ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.


ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯನ್ನೋ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.


ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.


ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.


ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.


ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು.


ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.


ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ.


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.


ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.


ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ಆಮೇಲೆ ಯೆಫ್ತಾಹನು ಅಮ್ಮೋನಿಯರ ದೇಶಕ್ಕೆ ಹೋಗಿ ಯುದ್ಧಮಾಡಿದನು. ಅವರನ್ನು ಸೋಲಿಸಲು ಯೆಹೋವನು ಯೆಫ್ತಾಹನಿಗೆ ಸಹಾಯ ಮಾಡಿದನು.


ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.


ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು