Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:12 - ಪರಿಶುದ್ದ ಬೈಬಲ್‌

12 ಇಸ್ರೇಲರು ಪುನಃ ದುಷ್ಕೃತ್ಯಗಳನ್ನು ಮಾಡುವುದನ್ನು ಯೆಹೋವನು ನೋಡಿದನು. ಆದ್ದರಿಂದ ಆತನು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಇಸ್ರೇಲರನ್ನು ಸೋಲಿಸುವ ಶಕ್ತಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿವಿುತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:12
15 ತಿಳಿವುಗಳ ಹೋಲಿಕೆ  

“ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.


ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


“ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”


“ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು