ನ್ಯಾಯಸ್ಥಾಪಕರು 3:15 - ಪರಿಶುದ್ದ ಬೈಬಲ್15 ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿ |
“‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.