Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:16 - ಪರಿಶುದ್ದ ಬೈಬಲ್‌

16 ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ತನಗಾಗಿ ಒಂದುವರೆ ಅಡಿ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ, ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಕೆಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:16
10 ತಿಳಿವುಗಳ ಹೋಲಿಕೆ  

“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.


ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ.


ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತಾಗ ಏಹೂದನು ತನ್ನ ಎಡಗೈಯನ್ನು ಚಾಚಿ ತನ್ನ ಬಲತೊಡೆಗೆ ಕಟ್ಟಿದ್ದ ಕತ್ತಿಯನ್ನು ಹೊರತೆಗೆದನು. ಏಹೂದನು ಆ ಖಡ್ಗವನ್ನು ಅರಸನ ಹೊಟ್ಟೆಗೆ ತಿವಿದನು.


ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.


ಏಹೂದನು ಮೋವಾಬ್ಯರ ಅರಸನಾದ ಎಗ್ಲೋನನ ಹತ್ತಿರ ಬಂದು ಅವನಿಗೆ ಕಪ್ಪದ ಹಣವನ್ನು ಕೊಟ್ಟನು. ಎಗ್ಲೋನನು ಬಹಳ ದಪ್ಪ ಮನುಷ್ಯನಾಗಿದ್ದನು.


ಯೋವಾಬನು ತನ್ನ ಸೈನ್ಯದೊಂದಿಗೆ ಗಿಬ್ಯೋನಿನಲ್ಲಿದ್ದ “ದೊಡ್ಡ ಕಲ್ಲಿನ” ಬಳಿಗೆ ಬಂದಾಗ, ಅಮಾಸನು ಅವರನ್ನು ಸಂಧಿಸಲು ಬಂದನು. ಯೋವಾಬನು ತನ್ನ ಸಮವಸ್ತ್ರಗಳನ್ನು ಧರಿಸಿದ್ದನು. ಸೊಂಟಪಟ್ಟಿಯನ್ನು ಕಟ್ಟಿಕೊಂಡಿದ್ದನು. ಅವನ ಖಡ್ಗವು ಒರೆಯಲ್ಲಿತ್ತು. ಅವನು ಅಮಾಸನನ್ನು ಸಂಧಿಸಲು ಮುಂದೆ ಸಾಗಿದಾಗ, ಅವನ ಖಡ್ಗವು ಒರೆಯಿಂದ ಹೊರಗೆ ಬಿದ್ದಿತು. ಯೋವಾಬನು ಖಡ್ಗವನ್ನು ಎತ್ತಿಕೊಂಡು ಅದನ್ನು ತನ್ನ ಕೈಗಳಲ್ಲಿ ಹಿಡಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು