Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:19 - ಪರಿಶುದ್ದ ಬೈಬಲ್‌

19 ಏಹೂದನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂತಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸಬೇಕಾದ ಒಂದು ರಹಸ್ಯ ಸಂದೇಶವಿದೆ” ಎಂದು ಹೇಳಿದನು. ಅರಸನು, “ಸುಮ್ಮನಿರು” ಎಂದು ಹೇಳಿ ತನ್ನ ಸೇವಕರೆಲ್ಲರನ್ನು ಕೋಣೆಯಿಂದ ಆಚೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು - ಅರಸೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವದೆ ಅಂದನು. ಆಗ ಅರಸನು ನಿಶ್ಶಬ್ದ ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಕ್ಕೆ ತಿರುಗಿ, ಅವನ ಬಳಿಗೆ ಬಂದು, “ಅರಸನೇ, ನಿನ್ನ ಸಂಗಡ ಹೇಳಬೇಕಾದ ರಹಸ್ಯವಾದ ಒಂದು ಮಾತು ಇದೆ,” ಎಂದನು. ಅವನು, “ನಿಶ್ಶಬ್ದ,” ಎಂದು ಹೇಳಿದಾಗ, ಅವನ ಬಳಿಯಲ್ಲಿ ನಿಂತಿದ್ದವರೆಲ್ಲರು ಅವನನ್ನು ಬಿಟ್ಟು ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:19
8 ತಿಳಿವುಗಳ ಹೋಲಿಕೆ  

ಅವರು ಜೋರ್ಡನ್ ನದಿಯಿಂದ ತೆಗೆದುಕೊಂಡು ಬಂದ ಆ ಹನ್ನೆರಡು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಹೋದರು. ಯೆಹೋಶುವನು ಆ ಕಲ್ಲುಗಳನ್ನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.


ಏಹೂದನು ಅರಸನಾದ ಎಗ್ಲೋನನ ಹತ್ತಿರಕ್ಕೆ ಹೋದನು. ಎಗ್ಲೋನನು ತಂಪಾದ ಅರಮನೆಯ ಮಹಡಿಯ ಕೋಣೆಯಲ್ಲಿ ಒಬ್ಬಂಟಿಗನಾಗಿ ಕುಳಿತಿದ್ದನು. ಆಗ ಏಹೂದನು, “ದೇವರಿಂದ ನಾನು ನಿನಗೆ ಒಂದು ಸಂದೇಶವನ್ನು ತಂದಿದ್ದೇನೆ” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತನು. ಅವನು ಏಹೂದನಿಗೆ ತುಂಬ ಹತ್ತಿರದಲ್ಲಿದ್ದನು.


ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.


ಏಹೂದನು ಎಗ್ಲೋನನಿಗೆ ಹಣವನ್ನು ಕೊಟ್ಟ ತರುವಾಯ ಅದನ್ನು ಹೊತ್ತುಕೊಂಡು ಬಂದ ಜನರನ್ನು ಮನೆಗೆ ಕಳುಹಿಸಿಬಿಟ್ಟನು.


ತಾಮಾರಳು ರೊಟ್ಟಿಗಳನ್ನು, ರೊಟ್ಟಿಮಾಡುವ ಪಾತ್ರೆಯಿಂದ ಹೊರ ತೆಗೆದು ಅಮ್ನೋನನಿಗೋಸ್ಕರ ಅವುಗಳನ್ನು ಬಡಿಸಿದಳು. ಆದರೆ ಅಮ್ನೋನನು ತಿನ್ನಲಿಲ್ಲ. ಅಮ್ನೋನನು ತನ್ನ ಸೇವಕರೆಲ್ಲರಿಗೆ, “ನೀವೆಲ್ಲರೂ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಹೋಗಿ!” ಎಂದನು. ಆದ್ದರಿಂದ ಸೇವಕರೆಲ್ಲರೂ ಅಮ್ನೋನನ ಕೊಠಡಿಯಿಂದ ಹೊರಗೆ ಹೋದರು.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು