ನ್ಯಾಯಸ್ಥಾಪಕರು 3:20 - ಪರಿಶುದ್ದ ಬೈಬಲ್20 ಏಹೂದನು ಅರಸನಾದ ಎಗ್ಲೋನನ ಹತ್ತಿರಕ್ಕೆ ಹೋದನು. ಎಗ್ಲೋನನು ತಂಪಾದ ಅರಮನೆಯ ಮಹಡಿಯ ಕೋಣೆಯಲ್ಲಿ ಒಬ್ಬಂಟಿಗನಾಗಿ ಕುಳಿತಿದ್ದನು. ಆಗ ಏಹೂದನು, “ದೇವರಿಂದ ನಾನು ನಿನಗೆ ಒಂದು ಸಂದೇಶವನ್ನು ತಂದಿದ್ದೇನೆ” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತನು. ಅವನು ಏಹೂದನಿಗೆ ತುಂಬ ಹತ್ತಿರದಲ್ಲಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಬಂದನು; “ನಿಮಗೆ ತಿಳಿಸಬೇಕಾದ ಒಂದು ದೈವೋಕ್ತಿ ಇದೆ,” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕೂತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ - ನಿನಗೆ ಹೇಳಬೇಕಾದದ್ದೊಂದು ದೇವೋಕ್ತಿಯಿದೆ ಅನ್ನಲು ಅವನು ತನ್ನ ಸಿಂಹಾಸನದಿಂದೆದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ, ಏಹೂದನು ಅವನ ಬಳಿಗೆ ಪ್ರವೇಶಿಸಿ, “ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗಿದೆ,” ಎಂದನು. ಅವನು ತನ್ನ ಸಿಂಹಾಸನದಿಂದ ಎದ್ದನು. ಅಧ್ಯಾಯವನ್ನು ನೋಡಿ |