ನ್ಯಾಯಸ್ಥಾಪಕರು 3:22 - ಪರಿಶುದ್ದ ಬೈಬಲ್22 ಏಹೂದನು ಕತ್ತಿಯನ್ನು ಜೋರಾಗಿ ಒತ್ತಿದ್ದರಿಂದ ಅದು ಹಿಡಿಯ ಸಹಿತ ಮುಳುಗಿ ಹೋಯಿತು. ಅರಸನ ಕೊಬ್ಬಿದ ದೇಹದಲ್ಲಿ ಕತ್ತಿಯು ಸಂಪೂರ್ಣವಾಗಿ ಮುಚ್ಚಿಕೊಂಡಿತು. ಆದ್ದರಿಂದ ಏಹೂದನು ಎಗ್ಲೋನನ ಹೊಟ್ಟೆಯಲ್ಲಿಯೇ ಖಡ್ಗವನ್ನು ಬಿಟ್ಟನು. ಮಲವು ಹೊರಗೆ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯನ್ನು ಹೊಕ್ಕಿತು. ಏಹೂದನು ಕತ್ತಿಯನ್ನು ಹೊರಗೆ ತೆಗೆಯಲಿಲ್ಲ. ಬೊಜ್ಜು ಅದನ್ನು ಮುಚ್ಚಿಕೊಂಡಿತ್ತು. ಮಲ ಹೊರಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಲಗೂ ಹಿಡಿಯೂ ಹೊಟ್ಟೆಯೊಳಗೆ ಹೊಕ್ಕವು. ಅವನು ಕತ್ತಿಯನ್ನು ಹೊರಗೆ ತೆಗೆಯದ್ದರಿಂದ ಕೊಬ್ಬು ಅಲಗನ್ನು ಸುತ್ತಿಕೊಂಡಿತು; ಮಲವು ಹೊರಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದು ಅಲಗಿನ ಸಂಗಡ ಹಿಡಿ ಸಮೇತ ಅವನ ಹೊಟ್ಟೆಯಲ್ಲಿ ಹೊಕ್ಕು, ಕಿತ್ತು ತೆಗೆಯಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು. ಅದರಿಂದ ಮಲವು ಹೊರಟಿತು. ಅಧ್ಯಾಯವನ್ನು ನೋಡಿ |