ನ್ಯಾಯಸ್ಥಾಪಕರು 3:25 - ಪರಿಶುದ್ದ ಬೈಬಲ್25 ಹೀಗಾಗಿ ಸೇವಕರು ಬಹಳ ಹೊತ್ತಿನವರೆಗೆ ಅರಸನಿಗಾಗಿ ಕಾಯುತ್ತಾ ಚಿಂತೆಗೊಳಗಾದರು. ಅವರು ಬೀಗದ ಕೈಯನ್ನು ತಂದು ಬಾಗಿಲುಗಳನ್ನು ತೆರೆದರು. ಸೇವಕರು ಒಳಗೆ ಹೋದಾಗ ತಮ್ಮ ಅರಸನು ನೆಲದ ಮೇಲೆ ಸತ್ತು ಬಿದ್ದಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಅರಸ ಕದಗಳನ್ನು ತೆರೆಯದೆ ಇರುವುದನ್ನು ನೋಡಿ ಬೀಗದ ಕೈಯಿಂದ ತಾವೇ ಬಾಗಿಲು ತೆರೆದರು. ಇಗೋ, ಅವರ ಒಡೆಯ ನೆಲದ ಮೇಲೆ ಸತ್ತುಬಿದ್ದಿದ್ದನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆಯಲು ಇಗೋ ಅವರ ಒಡೆಯನು ಸತ್ತು ಬಿದ್ದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ತಮಗೆ ಬೇಸರವಾಗುವ ಮಟ್ಟಿಗೂ ಕಾದಿದ್ದರು. ಆದರೆ, ಅವನು ಕೊಠಡಿ ಬಾಗಿಲನ್ನು ತೆರೆಯದೆ ಇದ್ದುದರಿಂದ, ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆದರು. ಅವರ ಪ್ರಭುವು ನೆಲದ ಮೇಲೆ ಮರಣಹೊಂದಿದ್ದನು. ಅಧ್ಯಾಯವನ್ನು ನೋಡಿ |