ನ್ಯಾಯಸ್ಥಾಪಕರು 3:27 - ಪರಿಶುದ್ದ ಬೈಬಲ್27 ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲ್ಯರು ಅವನ ಬಳಿಗೆ ಬಂದು ಗಟ್ಟಾ ಇಳಿದು ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು. ಅಧ್ಯಾಯವನ್ನು ನೋಡಿ |
ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.
ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.
ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.
ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”