Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:29 - ಪರಿಶುದ್ದ ಬೈಬಲ್‌

29 ಇಸ್ರೇಲರು ದೃಢಕಾಯರೂ ಧೈರ್ಯಶಾಲಿಗಳೂ ಆಗಿದ್ದ ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಕೊಂದುಹಾಕಿದರು. ಒಬ್ಬ ಮೋವಾಬ್ಯನೂ ತಪ್ಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಂದು ಅವರು ಸುಮಾರು ಹತ್ತು ಸಾವಿರಮಂದಿ, ಪುಷ್ಠ ಹಾಗು ಪರಾಕ್ರಮಿಗಳಾದ ಮೋವಾಬ್ಯರನ್ನು ಸದೆಬಡಿದರು. ಒಬ್ಬನೂ ತಪ್ಪಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರವಿುಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಒಬ್ಬನೂ ತಪ್ಪಿಸಿಕೊಳ್ಳದಂತೆ ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಪುಷ್ಟರೂ, ಪರಾಕ್ರಮಿಗಳೂ ಆಗಿದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:29
7 ತಿಳಿವುಗಳ ಹೋಲಿಕೆ  

ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬಕೊಚ್ಚಿಕೊಳ್ಳುತ್ತಾರೆ.


ದುಷ್ಟನ ಮುಖದಲ್ಲಿ ಕೊಬ್ಬೇರಿದೆ, ಅವನ ಸೊಂಟದಲ್ಲಿ ಬೊಜ್ಜು ಬೆಳೆದುಕೊಂಡಿದೆ.


ಏಹೂದನು ಮೋವಾಬ್ಯರ ಅರಸನಾದ ಎಗ್ಲೋನನ ಹತ್ತಿರ ಬಂದು ಅವನಿಗೆ ಕಪ್ಪದ ಹಣವನ್ನು ಕೊಟ್ಟನು. ಎಗ್ಲೋನನು ಬಹಳ ದಪ್ಪ ಮನುಷ್ಯನಾಗಿದ್ದನು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.


ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು