ನ್ಯಾಯಸ್ಥಾಪಕರು 3:3 - ಪರಿಶುದ್ದ ಬೈಬಲ್3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ. ಅಧ್ಯಾಯವನ್ನು ನೋಡಿ |
ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಈ ಇಲಿಗಳಿದ್ದವು. ಈ ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಈ ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಆ ಕಲ್ಲು ಈಗಲೂ ಇದೆ.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.
ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!