ನ್ಯಾಯಸ್ಥಾಪಕರು 3:4 - ಪರಿಶುದ್ದ ಬೈಬಲ್4 ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಾವು ಮೋಶೆಯ ಮೂಲಕ ಇವರ ಪೂರ್ವಜರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಯೇಲರು ಕೈಗೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕಾಗಿ ಸರ್ವೇಶ್ವರ ಅವರನ್ನು ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತಾನು ಮೋಶೆಯ ಮೂಲಕವಾಗಿ ಇವರ ಪಿತೃಗಳಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲ್ಯರು ಕೈಕೊಂಡು ನಡೆಯುವರೋ ಇಲ್ಲವೋ ಎಂಬದನ್ನು ಪರೀಕ್ಷಿಸಿ ತಿಳುಕೊಳ್ಳುವದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು. ಅಧ್ಯಾಯವನ್ನು ನೋಡಿ |
ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ:
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.