Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:6 - ಪರಿಶುದ್ದ ಬೈಬಲ್‌

6 ಇಸ್ರೇಲರು ಅವರ ಕನ್ಯೆಯರನ್ನು ಮದುವೆಯಾಗ ತೊಡಗಿದರು ಮತ್ತು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟರು ಮತ್ತು ಅವರ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ಪುತ್ರಿಯರನ್ನು ತಾವು ಹೆಂಡತಿಯರನ್ನಾಗಿ ತೆಗೆದುಕೊಂಡು, ತಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆ ಮಾಡಿಕೊಟ್ಟು, ಅವರ ದೇವರುಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:6
9 ತಿಳಿವುಗಳ ಹೋಲಿಕೆ  

ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


“ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.


“ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,


ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು