Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:8 - ಪರಿಶುದ್ದ ಬೈಬಲ್‌

8 ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:8
20 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ಮನೆಗಳು ಹೆದರಿ ನಡುಗುತ್ತಿದ್ದವು.


ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.


ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


“ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.


ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.


ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.


ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.


ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.


ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು