ನ್ಯಾಯಸ್ಥಾಪಕರು 4:10 - ಪರಿಶುದ್ದ ಬೈಬಲ್10 ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.