Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:15 - ಪರಿಶುದ್ದ ಬೈಬಲ್‌

15 ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ಧಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ತುತ್ತಾಗಿಸಿದರು. ಸೀಸೆರನು ರಥದಿಂದ ಹಾರಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ಬಲಿಕೊಟ್ಟನು. ಸೀಸೆರನು ರಥದಿಂದ ಹಾರಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಸೀಸೆರನನ್ನೂ, ಅವನ ಎಲ್ಲಾ ರಥಗಳನ್ನೂ, ಅವನ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಖಡ್ಗದಿಂದ ಚದರಿಸಿದರು. ಸೀಸೆರನು ರಥದಿಂದ ಇಳಿದು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:15
8 ತಿಳಿವುಗಳ ಹೋಲಿಕೆ  

ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದ್ದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು.


ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.


ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು