ನ್ಯಾಯಸ್ಥಾಪಕರು 4:17 - ಪರಿಶುದ್ದ ಬೈಬಲ್17 ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಏಕೆಂದರೆ ಯಾಬೀನನೆಂಬ ಹಾಚೋರಿನ ಅರಸನಿಗೂ, ಕೇನ್ಯನಾದ ಹೆಬೆರನ ಮನೆಗೂ ನಡುವೆ ಶಾಂತಿ ಇತ್ತು. ಅಧ್ಯಾಯವನ್ನು ನೋಡಿ |