Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:2 - ಪರಿಶುದ್ದ ಬೈಬಲ್‌

2 ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:2
11 ತಿಳಿವುಗಳ ಹೋಲಿಕೆ  

ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್‌ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.


ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು.


ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.


ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.


“ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.


ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.


ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು