20 ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಕೊಟ್ಟು ಅವನನ್ನು ತಿರಿಗಿ ಮುಚ್ಚಿದಳು. ಅವನು ಆಕೆಗೆ - ನೀನು ಗುಡಾರದ ಬಾಗಲಲ್ಲೇ ನಿಂತಿರು; ಯಾರಾದರೂ ಬಂದು ಇಲ್ಲಿ ಒಬ್ಬ ಮನುಷ್ಯನಿರುತ್ತಾನೋ ಎಂದು ವಿಚಾರಿಸಿದರೆ ಇಲ್ಲ ಅನ್ನು ಎಂದು ಹೇಳಿದನು.
ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.
ಸೀಸೆರನು ಯಾಯೇಲಳಿಗೆ, “ನನಗೆ ಬಾಯಾರಿಕೆಯಾಗಿದೆ. ದಯವಿಟ್ಟು ಕುಡಿಯಲು ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಯಾಯೇಲಳ ಬಳಿ ಪ್ರಾಣಿಗಳ ಚರ್ಮದಿಂದ ಮಾಡಿದ ಒಂದು ಚೀಲವಿತ್ತು. ಆಕೆಯು ಅದರಲ್ಲಿ ಹಾಲಿಟ್ಟಿದ್ದಳು. ಯಾಯೇಲಳು ಸೀಸೆರನಿಗೆ ಒಂದು ಗುಟುಕು ಹಾಲನ್ನೇ ಕೊಟ್ಟಳು. ನಂತರ ಅವಳು ಸೀಸೆರನನ್ನು ಮುಚ್ಚಿಬಿಟ್ಟಳು.
ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.