Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:22 - ಪರಿಶುದ್ದ ಬೈಬಲ್‌

22 ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನೀನು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ,” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತುಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು - ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿಯಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವುದಕ್ಕೆ ಹೊರಟುಹೋಗಿ ಅವನಿಗೆ, “ಬಾ, ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು,” ಎಂದು ಹೇಳಿದಳು. ಬಾರಾಕನು ಅವಳ ಬಳಿಗೆ ಬಂದಾಗ, ಸೀಸೆರನು ಮರಣಹೊಂದಿದ್ದನು. ಮೊಳೆಯು ಅವನ ತಲೆಯಲ್ಲಿ ಹೊಡೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:22
4 ತಿಳಿವುಗಳ ಹೋಲಿಕೆ  

ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.


ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.


ಆ ದಿನ ದೇವರು ಇಸ್ರೇಲರಿಗಾಗಿ ಕಾನಾನ್ಯ ರಾಜನಾದ ಯಾಬೀನನನ್ನು ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು