ನ್ಯಾಯಸ್ಥಾಪಕರು 4:23 - ಪರಿಶುದ್ದ ಬೈಬಲ್23 ಆ ದಿನ ದೇವರು ಇಸ್ರೇಲರಿಗಾಗಿ ಕಾನಾನ್ಯ ರಾಜನಾದ ಯಾಬೀನನನ್ನು ಸೋಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ದಿನದಂದು ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಯೆಲರಿಗೆ ಶರಣಾಗತನಾಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ದಿನದಲ್ಲಿ ದೇವರು ಕಾನಾನ್ಯರಾಜನಾದ ಯಾಬೀನನನ್ನು ಇಸ್ರಾಯೇಲ್ಯರ ಮುಂದೆ ತಗ್ಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆಯೇ ದೇವರು ಆ ದಿವಸದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದರು. ಅಧ್ಯಾಯವನ್ನು ನೋಡಿ |
ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನೀನು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.