ನ್ಯಾಯಸ್ಥಾಪಕರು 5:11 - ಪರಿಶುದ್ದ ಬೈಬಲ್11 ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೇದುವ ಬಾವಿಗಳ ಬಳಿಯಲ್ಲಿ ಕೊಳ್ಳೆಯನ್ನು ಹಂಚಿಕೊಳ್ಳುವವರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯನ್ನು ವರ್ಣಿಸುತ್ತಾರೆ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರು ಬಾಗಲುಗಳಿಗೆ ಇಳಿದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು. ಅಧ್ಯಾಯವನ್ನು ನೋಡಿ |
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.