ನ್ಯಾಯಸ್ಥಾಪಕರು 5:15 - ಪರಿಶುದ್ದ ಬೈಬಲ್15 ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗೆಯಿಂದ ಕಣಿವೆಗೆ ಬಂದರು. “ರೂಬೇನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲ ಪ್ರಭುಗಳೂ ಇಸ್ಸಾಕಾರ್ಯರೊಡನೆ ಬಾರಾಕನೂ ಆಗವಿುಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ಸರ್ರನೆ ತಗ್ಗಿಗೆ ಬಂದರು. ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ತೀರ್ಮಾನಗಳು ಘನವಾದವುಗಳೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು. ಹೌದು, ಇಸ್ಸಾಕಾರನ ಗೋತ್ರದವರು ಬಾರಾಕನ ಹಿಂದೆ ಅವನ ಕಟ್ಟಳೆಯ ಪ್ರಕಾರ, ಕಾಲುನಡಿಗೆಯಾಗಿ ಕಣಿವೆಯಲ್ಲಿ ನಡೆದರು. ರೂಬೇನನ ಕಡೆಯವರು ತಮ್ಮ ಹೃದಯಗಳನ್ನು ಮಹಾ ಪರಿಶೋಧನೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.