ನ್ಯಾಯಸ್ಥಾಪಕರು 5:16 - ಪರಿಶುದ್ದ ಬೈಬಲ್16 ಹೀಗಿರಲು ನೀವು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ ಕೂತಿರುವದೇಕೆ? ಮಂದೆಗಳ ಮಧ್ಯದಲ್ಲಿ ಕೊಳಲೂದುವದನ್ನು ಕೇಳಬೇಕೆಂದಿದ್ದೀರೋ? ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ವಿಚಾರಗಳು ಬಹು ಘನವಾದವುಗಳೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು. ಅಧ್ಯಾಯವನ್ನು ನೋಡಿ |