ನ್ಯಾಯಸ್ಥಾಪಕರು 5:18 - ಪರಿಶುದ್ದ ಬೈಬಲ್18 “ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜೆಬುಲೂನ್ಯರೂ ನಫ್ತಾಲ್ಯರೂ ಅಂಥವರಲ್ಲ; ಅವರು ಬೈಲಿನ ದಿನ್ನೆಗಳಲ್ಲಿ ತಮ್ಮ ಜೀವವನ್ನು ಮರಣಾಪತ್ತಿಗೊಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ನಫ್ತಾಲಿಯೂ ಸಹ ಹೊಲದ ಎತ್ತರವಾದ ಸ್ಥಳಗಳಲ್ಲಿ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.