‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’
ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.
ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.
ನಂತರ ನಾನು ಲೋಕದ ರಾಜರನ್ನು ಮತ್ತು ಮೃಗವನ್ನು ನೋಡಿದೆನು. ಅವರು ಕುದುರೆಯ ಮೇಲೆ ಕುಳಿತಿದ್ದವನ ಮೇಲೆ ಮತ್ತು ಅವನ ಸೈನ್ಯದ ಮೇಲೆ ಯುದ್ಧ ಮಾಡುವುದಕ್ಕಾಗಿ ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದ್ದರು.
ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು.
ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.
ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.