Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:21 - ಪರಿಶುದ್ದ ಬೈಬಲ್‌

21 ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಬಡಕೊಂಡು ಹೋಯಿತು. (ನನ್ನ ಮನವೇ, ಧೈರ್ಯದಿಂದ ಮುಂದೆ ಹೊರಡು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೀಷೋನ್ ನದಿಯು, ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:21
9 ತಿಳಿವುಗಳ ಹೋಲಿಕೆ  

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.


ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು.


“ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು