Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:23 - ಪರಿಶುದ್ದ ಬೈಬಲ್‌

23 “ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:23
23 ತಿಳಿವುಗಳ ಹೋಲಿಕೆ  

ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.


ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.


ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.


ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.


ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.


ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.


“ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.


ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.


ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.


ಆದರೆ ಸುಖೋತ್ ನಗರದ ನಾಯಕರು ಗಿದ್ಯೋನನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.


ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.


ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.


ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು