Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:24 - ಪರಿಶುದ್ದ ಬೈಬಲ್‌

24 ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. ಗುಡಾರದಲ್ಲಿ ವಾಸಿಸುವ ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:24
7 ತಿಳಿವುಗಳ ಹೋಲಿಕೆ  

ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.


ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.


ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.


ಸೀಸೆರನು ಯಾಯೇಲಳಿಗೆ, “ನನಗೆ ಬಾಯಾರಿಕೆಯಾಗಿದೆ. ದಯವಿಟ್ಟು ಕುಡಿಯಲು ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಯಾಯೇಲಳ ಬಳಿ ಪ್ರಾಣಿಗಳ ಚರ್ಮದಿಂದ ಮಾಡಿದ ಒಂದು ಚೀಲವಿತ್ತು. ಆಕೆಯು ಅದರಲ್ಲಿ ಹಾಲಿಟ್ಟಿದ್ದಳು. ಯಾಯೇಲಳು ಸೀಸೆರನಿಗೆ ಒಂದು ಗುಟುಕು ಹಾಲನ್ನೇ ಕೊಟ್ಟಳು. ನಂತರ ಅವಳು ಸೀಸೆರನನ್ನು ಮುಚ್ಚಿಬಿಟ್ಟಳು.


ಸೀಸೆರನು ನೀರು ಕೇಳಿದನು; ಯಾಯೇಲಳು ಅವನಿಗೆ ಹಾಲು ಕೊಟ್ಟಳು. ಅರಸನಿಗೆ ಯೋಗ್ಯವಾದ ಬಟ್ಟಲಲ್ಲಿ ಅವಳು ಅವನಿಗೆ ಕೆನೆಯನ್ನು ತಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು