26 ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದುಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
26 ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.
ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.