ನ್ಯಾಯಸ್ಥಾಪಕರು 5:3 - ಪರಿಶುದ್ದ ಬೈಬಲ್3 “ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು. ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅರಸರೇ, ಕೇಳಿ! ಪ್ರಭುಗಳೇ, ಕಿವಿಗೊಡಿ; ನಾ ಕಟ್ಟುವೆನು ಕವಿತೆಯನು ಸರ್ವೇಶ್ವರನಿಗೆ ನಾ ಭಜಿಸಿ ಹಾಡುವೆನು ಇಸ್ರಯೇಲರಾ ದೇವನಿಗೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅರಸರೇ, ಕೇಳಿರಿ; ಪ್ರಭುಗಳೇ, ಕಿವಿಗೊಡಿರಿ; ನಾನು ಯೆಹೋವನನ್ನು ಕೀರ್ತಿಸುವೆನು; ಇಸ್ರಾಯೇಲ್‍ದೇವರಾದ ಯೆಹೋವನಿಗೆ ಗಾನ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಅರಸರೇ ಕೇಳಿರಿ, ಪ್ರಭುಗಳೇ ಕೇಳಿರಿ, ಕಿವಿಗೊಡಿರಿ; ನಾನು, ನಾನೇ ಯೆಹೋವ ದೇವರಿಗೆ ಹಾಡುವೆನು. ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತುತಿಗೀತೆ ಹಾಡುವೆನು. ಅಧ್ಯಾಯವನ್ನು ನೋಡಿ |
ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.