Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:31 - ಪರಿಶುದ್ದ ಬೈಬಲ್‌

31 “ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:31
39 ತಿಳಿವುಗಳ ಹೋಲಿಕೆ  

ನಿನ್ನ ನೀತಿಯೂ ನ್ಯಾಯವೂ ಮಧಾಹ್ನದ ಸೂರ್ಯನಂತೆ ಪ್ರಕಾಶಿಸಲಿ.


ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.


ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.


ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.


ಚೀಯೋನೇ, ಕೇಳಿ ಸಂತೋಷಪಡು! ಯೆಹೂದದ ಪಟ್ಟಣಗಳೇ, ಆನಂದಿಸಿರಿ. ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.


ಯೆಹೋವನೇ, ನಿನ್ನ ಶತ್ರುಗಳೆಲ್ಲ ನಾಶವಾಗುವರು; ಕೆಟ್ಟಕಾರ್ಯಗಳನ್ನು ಮಾಡುವ ಅವರೆಲ್ಲರೂ ನಾಶವಾಗುವರು.


ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು.


ಅದು ಚಂದ್ರನಂತೆ ಶಾಶ್ವತವಾಗಿರುವುದು. ಈ ಒಪ್ಪಂದಕ್ಕೆ ಆಕಾಶವೇ ಸಾಕ್ಷಿ. ಈ ಒಪ್ಪಂದವು ನಂಬಿಕೆಗೆ ಯೋಗ್ಯವಾಗಿದೆ.”


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.


ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.


ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!


ನನ್ನನ್ನಾದರೋ ನೀನು ಕಾಡುಕೋಣ ಬಲಿಷ್ಠನನ್ನಾಗಿ ಮಾಡಿರುವೆ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು