ನ್ಯಾಯಸ್ಥಾಪಕರು 5:5 - ಪರಿಶುದ್ದ ಬೈಬಲ್5 ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕರಗಿಹೋದವು ಬೆಟ್ಟಗುಡ್ಡಗಳು ಆ ಸರ್ವೇಶ್ವರನ ಮುಂದೆ ನೀರಾಗಿ ಹೋಯಿತು ಸೀನಾಯಿ ಪರ್ವತವು ಇಸ್ರಯೇಲರ ದೇವನೆದುರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನ ಮುಂದೆ ಪರ್ವತಗಳು ಕರಗಿ ಹೋದವು, ಇಸ್ರಾಯೇಲ್ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರ ಮುಂದೆ ಬೆಟ್ಟಗಳು ಕಂಪಿಸಿದವು. ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮುಂದೆ ಸೀನಾಯಿ ಪರ್ವತವು ಸಹ ಕಂಪಿಸಿತು. ಅಧ್ಯಾಯವನ್ನು ನೋಡಿ |