Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:10 - ಪರಿಶುದ್ದ ಬೈಬಲ್‌

10 ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:10
23 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.


ಯೆಹೋವನು ಈ ಪ್ರಶ್ನೆಗಳಿಗೆ ಉತ್ತರಕೊಟ್ಟನು: “ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ.


ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು.


ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.


ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” ಎಂದು ಯೆಶಾಯ ಹೇಳಿದ್ದಾನೆ.


ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.


ಅವರು ಯೆಹೋವನಲ್ಲಿ ಭಕ್ತಿಯಿಟ್ಟಿದ್ದರು, ಆದರೆ ತಮ್ಮ ಸ್ವಂತ ದೇವರುಗಳ ಸೇವೆಯನ್ನೂ ಮಾಡಿದರು. ಅವರು ತಮ್ಮನ್ನು ತೆಗೆದುಕೊಂಡುಬಂದ ದೇಶಗಳಲ್ಲಿ ಮಾಡುತ್ತಿದ್ದಂತೆ ತಮ್ಮ ದೇವರುಗಳ ಸೇವೆಯನ್ನು ಮಾಡಿದರು.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ನಾನು ನಿಮ್ಮನ್ನು ಬಲಶಾಲಿಗಳಾದ ಈಜಿಪ್ಟಿನ ಜನರಿಂದ ರಕ್ಷಿಸಿದೆ. ತರುವಾಯ ಕಾನಾನ್ಯರು ನಿಮ್ಮನ್ನು ಪೀಡಿಸಿದರು. ಆಗ ಮತ್ತೊಮ್ಮೆ ನಾನು ನಿಮ್ಮನ್ನು ರಕ್ಷಿಸಿದೆ. ನಾನು ಅವರನ್ನು ಅವರ ಪ್ರದೇಶದಿಂದ ಓಡಿಸಿ ಅದನ್ನು ನಿಮಗೆ ಕೊಟ್ಟೆ’


ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ


ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.


ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು