ನ್ಯಾಯಸ್ಥಾಪಕರು 6:12 - ಪರಿಶುದ್ದ ಬೈಬಲ್12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.
ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.