Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:13 - ಪರಿಶುದ್ದ ಬೈಬಲ್‌

13 ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:13
22 ತಿಳಿವುಗಳ ಹೋಲಿಕೆ  

ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.


ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


“ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ.


ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!


“ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು?’ ಎಂದು ವಿಚಾರಿಸುವರು.


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.


ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.


ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು