ನ್ಯಾಯಸ್ಥಾಪಕರು 6:15 - ಪರಿಶುದ್ದ ಬೈಬಲ್15 ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಗಿದ್ಯೋನನು ಆತನಿಗೆ - ಸ್ವಾಮೀ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.