ನ್ಯಾಯಸ್ಥಾಪಕರು 6:18 - ಪರಿಶುದ್ದ ಬೈಬಲ್18 ದಯವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ, ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು,” ಎಂದು ಬಿನ್ನವಿಸಲು ಅವರು, “ನೀನು ತಿರುಗಿ ಬರುವವರೆಗೆ ನಾನು ಇಲ್ಲೇ ಇರುವೆನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು ಎಂದು ಬಿನ್ನವಿಸಲು ಆತನು - ನೀನು ತಿರಿಗಿ ಬರುವವರೆಗೆ ನಾನು ಇಲ್ಲೇ ಇರುವೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು. ಅಧ್ಯಾಯವನ್ನು ನೋಡಿ |
ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.