Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:19 - ಪರಿಶುದ್ದ ಬೈಬಲ್‌

19 ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಹತ್ತು ಕಿಲೋಗ್ರಾಂ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಓಕ್ ಮರದ ಕೆಳಗೆ ಅವರ ಮುಂದೆ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಒಂದು ಏಫಾ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:19
9 ತಿಳಿವುಗಳ ಹೋಲಿಕೆ  

“ಒಬ್ಬನು ಒಲೆಯಲ್ಲಿ ಬೇಯಿಸಿದ ಧಾನ್ಯನೈವೇದ್ಯವನ್ನು ಅರ್ಪಿಸಿದರೆ, ಆಗ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯಾಗಲಿ ಅಥವಾ ಎಣ್ಣೆ ಹೊಯಿದು ಮಾಡಿದ ಕಡುಬುಗಳಾಗಲಿ ಆಗಿರಬೇಕು.


ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”


ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.


ದಯವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ, ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು.


ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.


“ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ.


ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು